ಎಪ್ರಿಲ್ 4 ರಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Update: 2024-04-01 09:27 GMT

ಉಳ್ಳಾಲ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಎಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು, ಈ ಪ್ರಯುಕ್ತ ಬಿಜೆಪಿ ಚುನಾವಣಾ ಪ್ರಚಾರ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆರವಣಿಗೆಯಲ್ಲಿ ಸುಮಾರು 25000 ಕ್ಕೂ ಅಧಿಕ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದು, ಜೊತೆಗೆ ಮತದಾರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ, ಎಪ್ರಿಲ್ 4 ರಂದು ನಡೆಯುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ತಮಿಳುನಾಡು ರಾಜ್ಯದ ಹಿರಿಯ ಮುಖಂಡ ಅಣ್ಣಾಮಲೈ ಭಾಗವಹಿಸಲಿದ್ದಾರೆ. ಈ ಬಾರಿ ಬ್ರಿಜೇಶ್ ಚೌಟ ಅವರಿಗೆ ಅವಕಾಶ ‌ಸಿಕ್ಕಿರುವುದರಿಂದ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಎಪ್ರಿಲ್ 4 ರಂದು ನಾಮಪತ್ರ ಸಲ್ಲಿಸುವ ವೇಳೆ ಕಾಲ್ನಡಿಗೆ ಜಾಥಾದಲ್ಲಿ  ಸಹಸ್ರಾರು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆ ಆಗಿರುವುದರಿಂದ ಕಾರ್ಯಕರ್ತರು ಉತ್ಸಾಹ ದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಂದು ಹೇಳಿದರು.

ಸುದ್ದಿ ಗೋಷ್ಠಿ ಯಲ್ಲಿ ಬಿಜೆಪಿ ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ, ಸುಜಿತ್ ಮಾಡೂರು, ದಯಾನಂದ ತೊಕ್ಕೊಟ್ಟು ,ಚುನಾವಣಾ ನಿರ್ವಹಣಾ ಸಮಿತಿ ಸಹ ಸಂಚಾಲಕ ಹೇಮಂತ್ ಶೆಟ್ಟಿ ,ಜೀವನ್ ಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News