ಮಂಗಳೂರು: ಅ.18ರಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಕಾರ್ಯಕರ್ತರ ಸಮಾವೇಶ

Update: 2023-10-16 10:09 GMT

ಮಂಗಳೂರು: ಅ.18ರಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಕಾರ್ಯಕರ್ತರ ಸಮಾವೇಶ

ಮಂಗಳೂರು, ಅ. 16: ದ.ಕ. ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅ.18ರಂದು ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.

ಸದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಬೆಳಗ್ಗೆ 10ಕ್ಕೆ ನಡೆಯುವ ಕಾರ್ಯಕ್ರಮವನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಅಧ್ಯಕ್ಷತೆ ವಹಿಸಲಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದು, ರಾಜ್ಯಸಭಾ ವಿಪಕ್ಷ ಸಚೇತಕ ಹಾಗೂ ಎಐಸಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರಿಗೆ ಅಭಿನಂದನೆ ನಡೆಯಲಿದೆ ಎಂದರು.

ಮುಂದಿನ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ಕಾರ್ಯಕರ್ತರ ಸಮಾವೇಶ ಮಹತ್ವ ಪಡೆದಿದ್ದು, ಸುಮಾರು 3000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಹಮ್ಮದ್ ಬಪ್ಪಳಿಗೆ, ಪ್ರಕಾಶ್ ಆಲ್ವಿನ್, ಹಬೀಬ್ ಕಣ್ಣೂರು, ಶಬ್ಬೀರ್ ಎಸ್., ಸಬಿತಾ ಮಿಸ್ಕಿತ್, ನಝೀರ್ ಬಜಾಲ್, ವಳಾಲ್ ಶರೀಫ್, ಜಾರ್ಜ್ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News