ಸೆ.25ರಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-09-24 15:48 GMT

ಮಂಗಳೂರು, ಸೆ.24: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೆ.25ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 6:20ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಅಲ್ಲಿಂದ ಸರ್ಕ್ಯೂಟ್ ಹೌಸ್‌ಗೆ ತೆರಳುವರು. ಬೆಳಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಪರಾಹ್ನ 3ಕ್ಕೆ ನಗರದ ಮೋತಿಮಹಲ್‌ನಲ್ಲಿ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವವರ ಪುರ್ನವಸತಿ ಮೇಳದ ಉದ್ಘಾಟನಾ ಕಾರ್ಯಕ್ರಮದಯಲ್ಲಿ ಭಾಗವಹಿಸುವರು.

ಸಂಜೆ 4:30ಕ್ಕೆ ನಗರದ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ವೇಣೂರು ಮಹಾಮಸ್ತಕಾಭಿಷೇಕದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News