ಲೋಕಸಭಾ ಚುನಾವಣೆ ಹಿನ್ನಲೆ: ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ

Update: 2024-03-23 13:04 GMT

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ನಿರ್ಭೀತಿಯಿಂದ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸುವ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪುತ್ತೂರು ನಗರ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರಿಂದ ಶನಿವಾರ ಸಂಜೆ ಪುತ್ತೂರಿನ ನಗರದಲ್ಲಿ ಪಥ ಸಂಚಲನ ನಡೆಯಿತು.

ಪುತ್ತೂರು ಉಪ ವಿಭಾಗದ ಡಿವೈಎಸ್‍ಪಿ ಅರುಣ್ ನಾಗೇ ಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರದಲ್ಲಿ ಪಥ ಸಂಚಲನ ನಡೆಸಿ ಜನರಿಗೆ ಜಾಗೃತಿ ಮೂಡಿಸಿದರು. ನಗರದ ದರ್ಬೆ ವೃತ ದಿಂದ ಪ್ರಾರಂಭವಾದ ಪಥಸಂಚಲನವು ಮುಖ್ಯ ರಸ್ತೆಯಲ್ಲಿ ಸಂಚರಿಸಿ ಬೊಳುವಾರಿನಲ್ಲಿ ಸಮಾಪನಗೊಂಡಿತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News