ಆ:13: ಸುರತ್ಕಲ್ ಬಂಟರ ಸಂಘದಿಂದ ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ

Update: 2023-08-10 07:16 GMT

ಮಂಗಳೂರು ಆ.10:ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಇದರ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 13 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಸಂಘದ ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಕಾರ್ಯಕ್ರಮ‌ ಉದ್ಘಾಟಿಸಲಿದ್ದಾರೆ.

ಮಂಗಳೂರು ಸಂಧ್ಯಾ ಕಾಲೇಜು ವಿಶ್ವವಿದ್ಯಾನಿಲಯ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮೀ ಆರ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ ಸದಾನಂದ ಶೆಟ್ಟಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ, ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಎ ಶೆಟ್ಟಿ ಉಪಸ್ಥಿತರಿರುವರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುತ್ತದೆ. ಬಾಷಾ ಸಂಶೋಧನಾ ಕ್ಷೇತ್ರ: ಡಾ. ಸಾಯಿಗೀತಾ ಹೆಗ್ಡೆ, ಕಲೆ-ರಂಗಭೂಮಿ ಕ್ಷೇತ್ರ: ಪರಮಾನಂರ ಸಾಲ್ಯಾನ್ ಸಸಿಹಿತ್ಲು, ಸಂಗೀತ ಕ್ಷೇತ್ರ: ಸತೀಶ್ ಸುರತ್ಕಲ್, ಸಮಾಜ ಸೇವೆ: ಅಬ್ದುಲ್ ಅಝೀಜ್ ಸುರತ್ಕಲ್, ಕೃಷಿ ಕ್ಷೇತ್ರ: ವೆಂಕಟೇಶ್ ಶೆಟ್ಟಿ ಚೇಳಾರ್ ಇವರನ್ನು ಸನ್ಮಾನಿಸಲಾಗುವುದು.

ಸಮಾರಂಭದಲ್ಲಿ ಸಂಘದ ಮಹಿಳೆಯರಿಂದ ಗ್ರಾಮವಾರು ಜಾನಪದ ನೃತ್ಯ, ರೂಪಕ, ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಪುರುಷರಿಗೆ ಚೆನ್ನೆಮಣೆ ಆಟ, ತೆಂಗಿನಕಾಯಿ ಕುಟ್ಟುವುದು, ಮುಂಡಾಸು ಕಟ್ಟುವುದು, ಮಹಿಳೆಯರಿಗೆ ಚೆನ್ನೆಮಣೆ, ಹಿಡಿಸೂಡಿ ತಯಾರಿಸುವುದು, ಮಡಲು ಹೆಣೆಯುವ ಸ್ಪರ್ಧೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News