ವಿಟ್ಲ: ಖಾಸಗಿ ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-08-21 13:40 GMT

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನ ಸವಾರ ಸ್ಥಳೀಯ ನಿವಾಸಿ ಮುಝಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News