ಮೀಸಲಾತಿ ಕುರಿತಂತೆ ಕಾಂಗ್ರೆಸ್ ಹೇಳಿಕೆ ವಿರುದ್ಧ ಜನಜಾಗೃತಿ: ಬಿಜೆಪಿ
ಮಂಗಳೂರು: ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವ್ಯವಸ್ಥೆಯನ್ನೇ ಬುಡಮೇಲುಗೊಳಿಸುವ ಅಪಾಯ ವಿದೆ. ಹಾಗಾಗಿ ಶೋಷಿತರು, ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಕಿತ್ತುಕೊಳ್ಳಲಿದೆ. ಹಾಗಾಗಿ ಇದರ ವಿರುದ್ಧ ಬಿಜೆಪಿಯು ಪ್ರತಿಭಟನೆ, ಮಾಡಲಿದೆ, ಜನಜಾಗೃತಿ ನಡೆಸಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಹೇಳಿದರು.
ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೂಕ್ತ ಸಂದರ್ಭದಲ್ಲಿ ಮೀಸಲಾತಿ ಹಿಂತೆಗೆಯುವುದಾಗಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಆ ಸೂಕ್ತ ಸಂದರ್ಭ ಯಾವಾಗ ಎನ್ನುವುದನ್ನು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲೂ ಕೋರ್ಟ್ ತೀರ್ಪು ಪ್ರಕಟಿಸಬಹುದು. ಸಿದ್ಧರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ ವಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್, ಮಾಧ್ಯಮ ಸಂಚಾಲಕ ವಸಂತ ಜೆ. ಪೂಜಾರಿ, ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ, ಜಿಲ್ಲಾ ವಕ್ತಾರ ರಾಜ್‌ಗೋಪಾಲ್ ರೈ, ಮೋಹನ್‌ರಾಜ್ ಕೆ.ಆರ್., ಅರುಣ್ ಶೇಟ್, ಡೊಂಬಯ್ಯ, ಸತೀಶ್ ಪ್ರಭು ಉಪಸ್ಥಿತರಿದ್ದರು.