ನ. 8ರಂದು ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಸಮಾವೇಶ

Update: 2024-11-06 09:08 GMT

ಮಂಗಳೂರು, ನ.6: ‘ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು’ ಎಂಬ ವಿಷಯದಲ್ಲಿ ಜಮಾತೆ ಇಸ್ಲಾಮೀ ಹಿಂದ್ ಮಂಗಳೂರು ನಗರದ ಇದರ ಆಶ್ರಯದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.8 ರಂದು 6:40ಕ್ಕೆ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಜಮಾತೆ ಇಸ್ಲಾಮೀ ಹಿಂದ್ ಮಂಗಳೂರು ನಗರ ಅಧ್ಯಕ್ಷ ಇಸಾಕ್ ಪುತ್ತೂರು ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಆದರ್ಶ ಸಮಾಜವನ್ನು ಕಟ್ಟುವ ದಿಶೆಯಲ್ಲಿ ಅವಲೋಕನ ಈ ಸಭೆಯಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಸಾಮಾಜಿಕ ಮೌಲ್ಯಗಳು, ತತ್ವಗಳ ಬಗ್ಗೆ ಚರ್ಚೆ , ಇವತ್ತಿನ ದಿನಗಳಲ್ಲಿ ಉತ್ತಮ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬುದರ ವಿಶ್ಲೇಷಣೆಯೂ ಸಾರ್ವಜನಿಕ ಸಮಾವೇಶದಲ್ಲಿ ನಡೆಯಿದೆ ಎಂದರು.

ಸಮಾವೇಶದಲ್ಲಿ ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ , ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ವಾರ್ತಾಭಾರತಿ ಕನ್ನಡ ದಿನ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಲಿದ್ದಾರೆ ಎಂದು ಇಸಾಕ್ ಪುತ್ತೂರು ಮಾಹಿತಿ ನೀಡಿದರು.

ಜಮಾಅತೆ ಇಸ್ಲಾಮೀ ಹಿಂದ್ ಕಳೆದ 8 ದಶಕಗಳಿಂದ ಈ ದೇಶದಲ್ಲಿ ಚಟುವಟಿಕೆಯಲ್ಲಿದ್ದು, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ರಂಗಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇಸ್ಲಾಮಿನ ಮೌಲ್ಯಗಳನ್ನು ಜನರಿಗೆ ತಿಳಿಸುವುದು. ದೇಶದ ಶಾಂತಿ, ಸುಭದ್ರತೆ ಮತ್ತು ಒಳಿತಿಗಾಗಿ ಶ್ರಮಿಸುವುದನ್ನು ಮಾಡುತ್ತಾ ಬಂದಿದೆ. ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲೂ ಇದರ ಘಟಕವಿದ್ದು, ದಿಲ್ಲಿಯಲ್ಲಿ ಕೇಂದ್ರೀಯ ಕಚೇರಿಯಿದೆ. ಡಾ.ಬೆಳಗಾಮಿ ಮುಹಮ್ಮದ್ ಸಾದ್ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರ ಘಟಕದ ಉಪಾಧ್ಯಕ್ಷ ಅಬ್ದುರಹ್ಮಾನ್ ಕೆ, ಪ್ರಧಾನ ಕಾರ್ಯದರ್ಶಿ ಝಾಕಿರ್ ಹುಸೈನ್ , ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಸಂಚಾಲಕಿ ಸುಮಯ್ಯ ಹಮೀದುಲ್ಲಾ ಉಪಸಂಚಾಲಕಿ ಶಹೀದಾ ಉಮರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News