ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ: ಕೆ. ವಿ. ಪ್ರಭಾಕರ್

Update: 2025-03-27 18:11 IST
ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ: ಕೆ. ವಿ. ಪ್ರಭಾಕರ್
  • whatsapp icon

ಮಂಗಳೂರು: ಎಳೆಯ ಮಕ್ಕಳಿಗೆ ಶಿಕ್ಷಣ ನೀಡುವ ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಸಿಬ್ಬಂದಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿರುವುದು ಶ್ಲಾಘನೀಯ ಎಂದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಸ್ವಂತ ವೆಚ್ಚದಲ್ಲಿ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಶುದ್ದ ನೀರಿನ ಘಟಕ , ಫ್ಯಾನ್, ಸಮವಸ್ತ್ರ ನೀಡಲಾಗಿದ್ದು , ಬೇಡಿಕೆಗೆ ಅನುಗುಣವಾಗಿ ಇನ್ನಷ್ಟು ಸೌಲಭ್ಯ ನೀಡುವುದಾಗಿ ಕೆ.ವಿ.ಪ್ರಭಾಕರ್ ಈ ಸಂದರ್ಭ ತಿಳಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮಿ,ಆಶಾ ಕಾರ್ಯ ಕರ್ತೆ ಪ್ರಭಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News