ಪುತ್ತೂರು: ಆಟೋರಿಕ್ಷಾ ಪಲ್ಟಿ; ಚಾಲಕ ಮೃತ್ಯು
Update: 2024-12-22 08:06 GMT
ಪುತ್ತೂರು: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಬೈಪಾಸ್ ನಲ್ಲಿ ಸಂಭವಿಸಿದೆ.
ರಿಕ್ಷಾ ಚಾಲಕ ಸೂರ್ಯ ಎಂಬವರು ಮೃತಪಟ್ಟ ಚಾಲಕ. ಸೂರ್ಯ ಅವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿ ಯೊಂದು ಅಡ್ಡ ಬಂದಿದೆ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿತ್ತು. ತಕ್ಷಣವೇ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಚಾಲಕ ಸೂರ್ಯ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.