ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Update: 2023-10-10 06:08 GMT

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಪಡ್ಪು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಮೃತರನ್ನು ಕುರಿಯ ಪಡ್ಪು ನಿವಾಸಿ, ನಗರದ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.  ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News