ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ

Update: 2024-08-20 08:34 GMT

ಪುತ್ತೂರು, ಆ.20: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ಇಂದು ನಡೆದಿರುವುದು ವರದಿಯಾಗಿದೆ.

ಇರಿತದಿಂದ ಕೈಗೆ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News