ಪುತ್ತೂರು : ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

Update: 2023-10-28 14:40 GMT

ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ 40ರ ಹರೆಯದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉದಯ ಎಡಪದವು (40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಣಿಯಿಂದ ಪುತ್ತೂರು ಕಡೆಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೋಗುತ್ತಿದ್ದ ಬಾಲಕಿಗೆ ಉದಯ ಎಡಪದವು ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದೆ. ಈ ವಿಚಾರವನ್ನು ಆಕೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದ ಹಿನ್ನಲೆಯಲ್ಲಿ ಪ್ರಯಾಣಿಕರು ಆತನನ್ನು ನಡು ಮಾರ್ಗದಲ್ಲಿ ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ಸನ್ನು ನೇರವಾಗಿ ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ಬಸ್ಸಿನಿಂದಲೇ ವಶಕ್ಕೆ ಪಡೆದುಕೊಂಡರೆಂದು ತಿಳಿದು ಬಂದಿದೆ.

ಈ ಘಟನೆಯ ಸುದ್ದಿ ಹರಡುತ್ತಿದ್ದಂತೆಯೇ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಸೇರಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News