ಪುತ್ತೂರು: ನವ ವಿವಾಹಿತೆ ಆತ್ಮಹತ್ಯೆ

Update: 2024-02-05 14:09 GMT

ಪುತ್ತೂರು: 2 ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ ಯುವತಿ ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಗಡಾಜೆ ಎಂಬಲ್ಲಿ ನಡೆದಿದೆ.

ಗಡಾಜೆಯ ರೋಹಿತ್ ಎಂಬವರ ಪತ್ನಿ ಶೋಭಾ (26) ಅತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಅವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ಎಂಬಲ್ಲಿನ ನಿವಾಸಿ ರಾಮಣ್ಣ ಗೌಡ ಮತ್ತು ಪುಷ್ಪ ದಂಪತಿಯ ಪುತ್ರಿಯಾಗಿದ್ದು, 2 ತಿಂಗಳ ಹಿಂದೆ ರೋಹಿತ್ ಅವರನ್ನು ವಿವಾಹವಾಗಿದ್ದರು.

ರವಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News