ಪುತ್ತೂರು: ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Update: 2025-01-10 07:05 GMT
ಪುತ್ತೂರು: ನಗರದ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.
ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ದೀಕ್ಷಿತಾ ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಮರಳಿದವರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.