ಪುತ್ತೂರು: ಅವಿವಾಹಿತ ಯುವಕ ಆತ್ಮಹತ್ಯೆ
Update: 2024-01-02 09:39 GMT
ಪುತ್ತೂರು: ಅವಿವಾಹಿತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಆರ್ಲಪದವು ನಿವಾಸಿ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.