ಪುತ್ತೂರು: ಯುವಕ ಆತ್ಮಹತ್ಯೆ

Update: 2024-08-20 14:22 GMT

ಪುತ್ತೂರು: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಉದ್ದಳೆ ಎಂಬಲ್ಲಿ ಮಂಗಳವಾರ ನಡೆದಿದೆ.

ಇಲ್ಲಿನ ಕುಶಾಲಪ್ಪ ಗೌಡ ಎಂಬವರ ಪುತ್ರ ಸಚಿನ್(27) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅವರು ಮನೆಯ ಸಮೀಪದಲ್ಲಿನ ಗೇರು ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಅವರು ಬಜರಂಗದಳ ಕೆಯ್ಯೂರು ಘಟಕದ ಸುರಕ್ಷಾ ಪ್ರಮುಖ್ ಆಗಿದ್ದರು.

ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News