ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ; ರಾಜ್ಯ ಸರಕಾರವೂ ರಜೆ ಘೋಷಣೆ ಮಾಡಲಿ: ಬಿಜೆಪಿ

Update: 2024-01-20 09:14 GMT
Photo: twitter

ಮಂಗಳೂರು, ಜ. 20: ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆ ದಿನವನ್ನು ನಾವೆಲ್ಲರೂ ರಾಷ್ಟ್ರೀಯ ಉತ್ಸವವಾಗಿ ಆಚರಿಸೋಣ. ಕೇಂದ್ರ ಸರಕಾರ ಈಗಾಗಲೇ ಮಧ್ಯಾಹ್ನವರೆಗೆ ರಜೆ ಸಾರಿದ್ದು, ರಾಜ್ಯ ಸರಕಾರವೂ ಸರಕಾರಿ ಸಂಸ್ಥೆ, ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಿ ಎಂದು ಬಿಜೆಪಿ ವಕ್ತಾರ ಜಗದೀಶ್ ಶೇಣವ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರಕ್ಕೆ ದೇಶಾದ್ಯಂತ ಭಕ್ತರಿಂದ 3200ಕೋಟಿ ರೂ.ಗೂ ಅಧಿಕ ದೇಣಿಗೆ ಸಂಗ್ರಹವಾಗಿದೆ. ಈಗಾಗಲೇ ದೇಶಾದ್ಯಂತ ಅಯೋಧ್ಯೆಯಿಂದ ಬಂದಂತಹ ಅಕ್ಷತೆ ಹಾಗೂ ರಾಮನ ಫೋಟೋ ಹಂಚುವ ಕೆಲಸ ಮುಗಿದಿದ್ದು, ಮಹಾ ಉತ್ಸವಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ. ಕೇಂದ್ರ ಸರಕಾರ ಮಾತ್ರವಲ್ಲದೆ ದೊಡ್ಡ ದೊಡ್ಡ ಕಂಪನಿಗಳು ರಜೆ ಸಾರಿದೆ. ಜಿಲ್ಲೆಯಲ್ಲೂ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟು ಬಂದ್ ಮಾಡಿ ಈ ಮಹೋತ್ಸವದಲ್ಲಿ ಪಾಲ್ಗೊಳ್ಳೋಣ ಎಂದು ಹೇಳಿದರು.

ಅಯೋಧ್ಯೆಯ ರಾಮ ಮಂದಿರ ಬಗ್ಗೆ ಅತೃಪ್ತ ಆತ್ಮಗಳು ಮಾತನಾಡುತ್ತಿವೆ. ಅದಕ್ಕೆ ತಲೆಕೆಡಿಸಿಕೊಳ್ಳುವಂತದ್ದೇನಿಲ್ಲ. ಕೆಲವರು ಪ್ರಚಾರಕ್ಕಾಗಿ ವಿರೋಧ ಮಾಡುತ್ತಾರೆ. ರಾಮ ಪ್ರತಿಷ್ಠಾ ಮಹೋತ್ಸವವನ್ನು ದೇಶ-ವಿದೇಶಗಳಲ್ಲಿ ಆಚರಿಸುತ್ತಿದ್ದು, 55 ದೇಶಗಳಿಂದ ಪ್ರತಿನಿಧಿಗಳು ಆಗಮಿಸುತ್ತಿದ್ದಾರೆ. ಇದು ಈ ಉತ್ಸವದ ಹಿಂದಿರುವ ಮಹತ್ವ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಡಂಡರಾದ ವಕ್ತಾರಾದ ರವಿಶಂಕರ್ ಮಿಜಾರು, ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಉಪಾಧ್ಯಕ್ಷೆ ಪ್ರಭಾ ಮಾಲಿನಿ, ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಗುರುಚರಣ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News