ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಶ್ರಮದಾನ

Update: 2024-09-08 13:24 GMT

ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಎರಡನೇ ಆವೃತ್ತಿಯ ಹನ್ನೆರಡನೇ ತಿಂಗಳ ಸ್ವಚ್ಛ ಸಾಗರ ಅಭಿಯಾನ ಎಂಬ ಶೀರ್ಷಿಕೆಯೊಂದಿಗೆ ಸ್ವಚ್ಛತಾ ಅಭಿಯಾನವನ್ನು ರವಿವಾರ ತಣ್ಣೀರುಬಾವಿ ಕಡಲತೀರದಲ್ಲಿ ನಡೆಸಲಾಯಿತು.

ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹಾಗೂ ನಿಟ್ಟೆ ವಿವಿ ಕುಲಾಧಿಪತಿ ವಿನಯ್ ಹೆಗ್ಡೆ ಹಸಿರು ನಿಶಾನೆ ತೋರುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಮಂಗಳೂರು ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ನಿಟ್ಟೆ ವಿವಿ ಹಾಗೂ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಅಂತಾರಾಷ್ಟ್ರೀಯ ಫಿಸಿಯೋಥೆರಪಿ ದಿನಾಚರಣೆಯ ಅಂಗವಾಗಿ ಸ್ವಚ್ಛ ಸಾಗರ ಅಭಿಯಾನದಲ್ಲಿ ಪಾಲ್ಗೊಂಡರು.

ಈ ಸಂದರ್ಭ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಯೋಜನಾ ಇಂಡಿಯಾ ಪ್ರೈ.ಲಿ.ನ ಯೋಜನಾ ನಿರ್ದೇಶಕ ಕೆ.ಪಿ. ಪಣಿಕ್ಕರ್, ನಿಟ್ಟೆ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಧನೇಶ್ ಕುಮಾರ್, ಸ್ವಚ್ಛ ಸೇನಾ ತಂಡದ ಸಂಯೋಜಕ ಪ್ರೊ. ರಾಕೇಶ್‌ಕೃಷ್ಣ, ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್‌ರಾವ್, ಕಮಲಾಕ್ಷ ಪೈ, ವಿಠಲದಾಸ್ ಪ್ರಭು, ಉಮಾನಾಥ್ ಕೋಟೆಕಾರ್, ಪ್ರಾಧ್ಯಾಪಕರಾದ ಪ್ರಕಾಶ್ ಮತ್ತು ಶ್ರೀವತ್ಸ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News