ಉಪ್ಪಿನಂಗಡಿ| ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ: ಪೋಕ್ಸೊ ಪ್ರಕರಣ ದಾಖಲು

Update: 2024-09-12 16:58 GMT

ಸಾಂದರ್ಭಿಕ ಚಿತ್ರ (PTI)

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News