ಮಂಗಳೂರು: ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಗಣರಾಜ್ಯೋತ್ಸವ

ಮಂಗಳೂರು: ಇನ್ನೋಳಿಯಲ್ಲಿರುವ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗಿದೆ.
ಯೆನೆಪೋಯ ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಜೀವನ್ ರಾಜ್ ಧ್ವಜಾರೋಹಣದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ವೇಳೆ ಅವರು ಸಂವಿಧಾನದ ಮಹತ್ವ ಮತ್ತು ನಾಗರಿಕರ ಜವಾಬ್ದಾರಿಗಳ ಕುರಿತು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಬೀಡ್ಸ್ (ಬ್ಯಾರೀಸ್ ಎನ್ವಿರೋ ಆರ್ಕಿಟೆಕ್ಚರಲ್ ಡಿಸೈನ್ ಸ್ಕೂಲ್) ನ ಪ್ರಾಂಶುಪಾಲರಾದ ಅರ್. ಖಲೀಲ್ ರಝಾಕ್ ಮತ್ತು ಬಿಐಟಿಪಿ (ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಪಾಲಿಟೆಕ್ನಿಕ್) ನಿರ್ದೇಶಕ ಪ್ರೊ. ಪೃಥ್ವಿರಾಜ್ ಅವರು ಗಣರಾಜ್ಯೋತ್ಸವದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ಮಾತನಾಡಿದ್ದಾರೆ.
ಬಿಐಪಿಯುಸಿ (ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಪ್ರಿ-ಯೂನಿವರ್ಸಿಟಿ ಕಾಲೇಜು) ಪ್ರಾಂಶುಪಾಲರಾದ ಪ್ರೊ. ಅಬ್ದುಲ್ ಲತೀಫ್ ಕಾರ್ಯಕ್ರಮದಲ್ಲಿ ಸ್ವಾಗತಿಸಿದ್ದು, ಬಿಐಇಎಸ್ (ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸಸ್) ಪ್ರಾಂಶುಪಾಲ ಡಾ. ಅಝೀಝ್ ಮುಸ್ತಫಾ ಧನ್ಯವಾದವನ್ನು ಸಲ್ಲಿಸಿದ್ದಾರೆ.

