ಸಾಗರ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

Update: 2024-03-07 06:41 GMT

ಸಾಗರ, ಮಾ.7: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋಪಾಲಗೌಡ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಗೋಪಾಲಗೌಡ ನಗರದ ನಿವಾಸಿ ಭೂಮಿಕಾ(18) ಆತ್ಮಹತ್ಯೆ ಮಾಡಿಕೊಂಡವರು. ಅವರು ಮೈಸೂರು-ತಾಳಗುಪ್ಪ ಮಾರ್ಗ ಮಧ್ಯ ಸಂಚರಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದು ಎಂದು ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News