ಸಜಿಪ ಮುನ್ನೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

Update: 2023-11-19 14:56 GMT

ಬಂಟ್ವಾಳ : ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಎಚ್. ವಿರುದ್ಧ ಪ್ರಕರಣ ದಾಖಲಾಗಿದೆ.

ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯೆ ಫೌಝಿಯಾ ಅವರು  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಎಚ್. ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದು, ನ್ಯಾಯಾಲಯದ ಡಿಸ್ ಸಂಖ್ಯೆ 1595/2023 ರಂತೆ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ.

ಪಂಚಾಯತ್ ನ 8 ಮಂದಿ ಸದಸ್ಯರಿಗೆ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅವರು ಅನ್ಯಾಯ ನಡೆಸಿರುವುದನ್ನು ಖಂಡಿಸಿ 8 ಮಂದಿ ಸದಸ್ಯರು ಅಕ್ಟೋಬರ್ 30 ರಂದು ಪಂಚಾಯತ್ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಸ್ಥಳಕ್ಕೆ ಬಂದು ಏಕಾಏಕಿ ದರ್ಪವನ್ನು ತೋರಿಸಿ, ಮಹಿಳೆ ಎಂಬುದನ್ನೂ ಲೆಕ್ಕಿಸದೇ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿ ಅಗೌರವ ತೋರಿಸಿದ್ದಾರೆ. ಈ ಕೃತ್ಯ ಎಸಗಿದ ಲಕ್ಷ್ಮಣ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಫೌಝಿಯಾ ದೂರಿನಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದೀಕ್, ಜಮಾಲುದ್ದೀನ್, ಫಾತಿಮಾ ಸೌನ್, ಫೌಝಿಯಾ, ಸಬೀನಾ, ರಝಿಯಾ, ಸಾಜಿದ್, ವಹಿದಾ ಬಾನು ಎಂಬವರ ವಿರುದ್ಧ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅ.30 ರಂದು ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News