ಸಂಪಾಜೆ: ಹೋಟೆಲ್ ಗೆ ಕಾರು ಢಿಕ್ಕಿ; ದಂಪತಿಗೆ ಗಾಯ
Update: 2024-05-03 05:55 GMT
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಗಂಭೀರ ಗಾಯಗೊಂಡ ಘಟನೆ ಸಂಪಾಜೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ವಿಟ್ಲ ಅಡ್ಯನಡ್ಕದ ದಂಪತಿ ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೇ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದಿದೆ.
ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿ ಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಸೇರಿ ಎರಡು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.