ಸೆ. 20: ದ.ಕ.ಉಸ್ತುವಾರಿ ಸಚಿವರ ಪ್ರವಾಸ

Update: 2023-09-19 13:12 GMT

ಮಂಗಳೂರು, ಸೆ.19: ದ.ಕ.ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೆ.20ರಂದು ದ.ಕ.ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಸೆ.20ರ ಬೆಳಗ್ಗೆ 9ಕ್ಕೆ ನಗರದ ಸರ್ಕ್ಯೂಟ್ ಹೌಸ್‌ಗೆ ಆಗಮಿಸುವರು. ರಾತ್ರಿ 9:30ಕ್ಕೆ ದಿ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆಯುವ ಮಂಗಳೂರು ಟ್ರೇಯತ್ಲಾನ್ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವರು. 10:30ಕ್ಕೆ ನಗರದ ಪಿವಿಎಸ್ ಸರ್ಕಲ್‌ನಲ್ಲಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದವಿ ದ್ಯಾರ್ಥಿ ನಿಲಯಗಳ ಉದ್ಘಾಟನೆ ಮತ್ತು ಬಂಟ್ವಾಳ ತಾಲೂಕಿನ ಭಾಗವಹಿಸುವರು. 11:45ಕ್ಕೆ ಸಂತ ಅಲೋಶಿಯಸ್ ಕಾಲೇಜ್ ಆವರಣದಲ್ಲಿ ಆಯೋಜಿಸಿರುವ ಎಚೋಸ್ ಆಫ್ ದಿ ಕ್ವಾರಿಡೋರ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:15ಕ್ಕೆ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಮಧ್ಯಾಹ್ನ 2ಕ್ಕೆ ವೆನ್ಲಾಕ್ ಆಸ್ಪತ್ರೆಗೆ ಭೆೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸುವರು.

ಸಂಜೆ 5ಕ್ಕೆ ಡಿಸಿ ಕಚೇರಿಯಲ್ಲಿ ನಿಫಾ ವೈರಸ್ ಬಗ್ಗೆ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸುವರು. ಸಂಜೆ 6ಕ್ಕೆ ಬಂಟ್ಸ್ ಹಾಸ್ಟೆಲ್ ಓಂಕಾರ ನಗರದ ಬಂಟರೆ ಯಾನೆ ನಾಡವರ ಮಾತೃ ಸಂಘಗಳ ವತಿಯಿಂದ ಹಾಗೂ 6:30ಕ್ಕೆ ನಗರದ ಜಪ್ಪಿನಮೊಗರು ಬಂಟರ ಸಂಘದ ಪ್ರಾಯೋಜಕತ್ವದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ರಾತ್ರಿ 9:50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News