ಆ.21ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

Update: 2023-07-29 13:24 GMT

ಮಂಗಳೂರು, ಜು.29: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2022-23 ಮತ್ತು ಅದಕ್ಕೂ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿ ವಿಶೇಷ ಪೂರಕ ಪರೀಕ್ಷೆ (ಎರಡನೇ ಬಾರಿ) ನಡೆಸಲು ಉದ್ದೇಶಿಸಿದೆ.

ಆಗಸ್ಟ್ 21ರಿಂದ ಸೆಪ್ಟಂಬರ್ 2ರವರೆಗೆ ನಡೆಯುವ ಈ ಪರೀಕ್ಷೆಯಲ್ಲಿ ಬರೆಯಲು ಆಸಕ್ತಿಯಿರುವ ವಿದ್ಯಾರ್ಥಿಗಳು ತಮ್ಮ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಿ ಆ.10ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದು.

ಪ್ರಥಮ ಬಾರಿಗೆ ನಡೆಸಲಾಗುವ ಈ ವಿಶೇಷ ಪೂರಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕ ಜಯಣ್ಣ ಸಿ.ಡಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News