ಸೆ.15: ಮಾನವ ಸರಪಳಿ; ಸಾರ್ವಜನಿಕರಿಗೆ ಸೂಚನೆ

Update: 2024-09-13 14:17 GMT

ಮಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ನಡೆಯುವ ಮುಲ್ಕಿ ಹೆಜಮಾಡಿ ಟೋಲ್‌ಗೇಟ್‌ನಿಂದ ಸುಳ್ಯ ಸಂಪಾಜೆಗೇಟ್‌ವರೆಗೆ ನಡೆಯುವ ಮಾನವ ಸರಪಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಕೆಲವು ಸೂಚನೆಗಳನ್ನು ನೀಡಿದೆ.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 130 ಕಿಮೀವರೆಗೆ ಸಾಗಲಿರುವ ಈ ಮಾನವ ಸರಪಳಿಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.

ರವಿವಾರ ಬೆಳಗ್ಗೆ 9:30ರಿಂದ 9:37ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9:40ರವರೆಗೆ ನಾಡಗೀತೆ, 9:41ರಿಂದ 9:55ರವರೆಗೆ ಅತಿಥಿಗಳಿಂದ ಭಾಷಣ, 9:55ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57ರಿಂದ 9:59ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಗ್ಗೆ 10ಕ್ಕೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್,ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ.

ಈಗಾಗಲೇ ಈ ಮಾನವ ಸರಪಳಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿದೆ.ವಿದ್ಯಾರ್ಥಿಗಳು, ಯುವ ಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂದಿ ವರ್ಗ ಸಹಿತ ಸಾರ್ವಜನಿಕರು ಇದರಲ್ಲಿ ಭಾಗವಹಿ ಸಲಿದ್ದಾರೆ. ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News