ಸೆ.30: ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ
ಕೊಣಾಜೆ, ಸೆ.28: ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ಜಿಪಂ, ಹರೇಕಳ ಗ್ರಾಪಂ ಮತ್ತು ಜನಶಿಕ್ಷಣ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನವು ಸೆ.30ರಂದು ಬೆಳಗ್ಗೆ 10ಕ್ಕೆ ಹರೇಕಳ ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ. ಜಿಪಂ ಸಿಇಒ ಡಾ.ಅನಂದ್, ಉಳ್ಳಾಲ ತಾಲೂಕು ಇಒ ಶೀಲಾ, ಹರೇಕಳ ಗ್ರಾಪಂ ಅಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಅಬ್ದುಲ್ ಮಜೀದ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಆಧ್ಯಕ್ಷ ವಸಂತ ಕೊಣಾಜೆ, ಮುಡಿಪು ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಶೀನ ಶೆಟ್ಟಿ, ಕೃಷ್ಣ ಮೂಲ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನದ ಅಂಗವಾಗಿ ಸಾರ್ವಜನಿಕರು ತರುವ 100 ಗ್ರಾಂ ನಿಂದ 500 ಗ್ರಾಂವರೆಗಿನ ಪ್ಲಾಸ್ಟಿಕ್‌ಗೆ 1 ಕೆಜಿ ಅಕ್ಕಿ ಹಾಗೂ 500 ಗ್ರಾಂ ಮೇಲ್ಪಟ್ಟು ಪ್ಲಾಸ್ಟಿಕ್ ತಂದ ಸಾರ್ವಜನಿಕರಿಗೆ 5 ಕೆಜಿ ಅಕ್ಕಿಯನ್ನು ಹಾಗೂ 1 ಕೆಜಿ ಮೇಲ್ಪಟ್ಟು ಪ್ಲಾಸ್ಟಿಕ್ ತಂದವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.