ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Update: 2024-09-13 14:13 GMT

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

ಸೆ.17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಸೆ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಸೆ.21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರ ಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News