ಕ್ರೀಡೆಗಳು ನಮ್ಮನ್ನು ಸದೃಢ ಮತ್ತು ಕ್ರಿಯಾಶೀಲರನ್ನಾಗಿಸುತ್ತದೆ: ಧನ್ಯ ನಾಯಕ್

Update: 2023-11-19 11:52 GMT

ಮಂಗಳೂರು: ಕ್ರೀಡೆಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗಿವೆ. ಶಾಲಾ ದಿನಗಳಲ್ಲಿ ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ಕ್ರಿಯಾಶೀಲರಾಗಿರಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎನ್. ನಾಯಕ್ ತಿಳಿಸಿದರು.

ಅವರು ಕಣ್ಣೂರು ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಅಲ್ ಹಾಜಿ ಕೆ.ಬಿ. ಅಬ್ದುಲ್ ರಹ್ಮಾನ್ ವಹಿಸಿದ್ದರು. ಮೀಫ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ ಪಿ. ಬ್ಯಾರಿ, ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಹಾಗೂ ಮಂಗಳೂರು ನಗರ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಎಚ್.ಎಸ್.‌ ಭಜಂತ್ರಿ ಭಾಗವಹಿಸಿದ್ದರು.

ಸರ್ಕಲ್ ಇನ್ಸ್ಪೆಕ್ಟರ್ ಎಚ್.ಎಸ್.‌ ಭಜಂತ್ರಿ ಧ್ವಜಾರೋಹಣ ನೆರವೇರಿಸಿದರು. ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನು ನಾಲ್ಕು ವಿವಿಧ ಮನೆಗಳಾಗಿ ವಿಭಾಗಿಸಲಾಗಿತ್ತು. 4 ವಿವಿಧ ಮನೆಗಳ ಮಾರ್ಚ್ ಫಾಸ್ಟ್ ನೊಂದಿಗೆ ಪ್ರಾರಂಭವಾಯಿತು. ಅತಿಥಿಗಳು ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಮೀಪ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ ಪಿ ಬ್ಯಾರಿ ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಸಲುವಾಗಿ ಕಣ್ಣೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಮಾರೋಪ ಸಮಾವೇಶದಲ್ಲಿ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮಂಗಳೂರು ದೈಹಿಕ ಶಿಕ್ಷಣ ಪರಿವೀಕ್ಷಕ ಅಧಿಕಾರಿ ರವಿಶಂಕರ್ ಹಾಗೂ ಬಜಾಲ್ ನಂತೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನಿರ್ಮಲ ವಿಲ್ಮಾ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಸ್ ಉಮರಬ್ಬ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಂಶಾದ್ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ‌ ವಿಶಾಲಾಕ್ಷಿ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಲ್ತಾಫ್ ಸಾಬ್ ಹಾಗೂ ಶಿಕ್ಷಕ ವೃಂದದವರು ಕ್ರೀಡೆಯನ್ನು ನಡೆಸಿಕೊಟ್ಟರು.

ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಮತ್ತು ಪಿ.ಯು. ಮಹಿಳಾ ಕಾಲೇಜಿನ ಸಂಚಾಲಕರಾದ ರಿಯಾಝ್ ಅಹ್ಮದ್ ಕಣ್ಣೂರು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಜಿ ಸಿತ್ತಾರ್ ವಂದಿಸಿದರು. ಶಿಕ್ಷಕಿ ವಿಲಿಶಾ ಕಾರ್ಯಕ್ರಮ ನಿರೂಪಿಸಿದರು.










































 


 


 


 


 


 


 


 


 


 


 


 


 


 


 


 


 


 


 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News