ಕೆಎಂಕೆ ಮಂಜನಾಡಿಗೆ ರಾಜ್ಯ ಉತ್ಯಮ ಶಿಕ್ಷಕ ಪ್ರಶಸ್ತಿ
Update: 2023-09-09 14:11 GMT
ಮಂಗಳೂರು, ಸೆ.9: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಳ್ಳಾಲದ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೊಟೆಯಲ್ಲಿ ನಡೆಸಲ್ಪಡುವ ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಅವರಿಗೆ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣಾ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಠದ ಸ್ವಾಮೀಜಿ ನಿರ್ಮಲಾನಂದ ಸ್ವಾಮೀಜಿಯ ಉಪಸ್ಥಿತಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು.