ಸೆ.5ರಿಂದ ರಾಜ್ಯ ಹಜ್ ಸಚಿವರ ಪ್ರವಾಸ

Update: 2023-09-02 17:12 GMT

ಮಂಗಳೂರು,ಸೆ.2: ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸೆ.5 ಮತ್ತು 6ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಸೆ.5ರ ಬೆಳಗ್ಗೆ 6:20ಕ್ಕೆ ಮಂಗಳೂರಿಗೆ ಆಗಮಿಸುವರು. 8:30ಕ್ಕೆ ಯೆನೆಪೊಯ ಅಬ್ದುಲ್ಲಾ ಕುಂಞಿ ಹಾಗೂ ಅಲ್ಪ ಸಂಖ್ಯಾತರ ಸಮುದಾಯದ ಮುಖಂಡರೊಡನೆ ಚರ್ಚೆ ನಡೆಸುವರು. 9ಕ್ಕೆ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಫಿಜಿಯೋಕಾನ್ ರಕ್ತದಾನ ಶಿಬಿರದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:30ಕ್ಕೆ ಪುತ್ತೂರು ತಾಲೂಕಿನ ಮಿತ್ತೂರಿನ ಇಡ್ಕಿದು ಗ್ರಾಮದ ದಾರುಲ್ ಇರ್ಷಾದ್ ಆವರಣದಲ್ಲಿ ಪ್ರಧಾನಮಂತ್ರಿ ಜನ ವಿಕಾಸ ಯೋಜನೆಯಡಿ ನಿರ್ಮಾಣ ಗೊಂಡಿರುವ ಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:30ಕ್ಕೆ ಮಂಗಳೂರಿಗೆ ಆಗಮಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಸಂಜೆ 4ಕ್ಕೆ ನಗರದ ಪುರಭವನದಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 7ಕ್ಕೆ ತೊಕ್ಕೊಟ್ಟು ಹಳೆಪೇಟೆ ಮೀನು ಮಾರುಕಟ್ಟೆ ಮತ್ತು ಕೊಳಚೆ ಪ್ರದೇಶಕ್ಕೆ ಭೇಟಿ ನೀಡುವರು. 7:30ಕ್ಕೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವರು. ರಾತ್ರಿ 8ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡುವರು.

ಸೆ.6ರ ಬೆಳಗ್ಗೆ 9:30ಕ್ಕೆ ಪ್ರಸ್ತಾವಿತ ಹಜ್ ಭವನ ಸ್ಥಳ ಪರಿಶೀಲನೆ ನಡೆಸುವರು. 11:30ಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಇಂದಿರಾ ಕ್ಯಾಂಟೀನ್ ಸೈಟ್, ನಗರೋತ್ಥಾನ ಕಾಮಗಾರಿಗಳ ಪರಿಶೀಲನೆ ನಡೆಸುವುದು. 2ಕ್ಕೆ ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News