ನ.18ರಂದು ಸಹಕಾರಿ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ: ಡಾ. ರಾಜೇಂದ್ರ ಕುಮಾರ್

Update: 2023-11-06 17:10 GMT

ಮಂಗಳೂರು; ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘‘ಸಾರ್ವಜನಿಕ – ಖಾಸಗಿ – ಸಹಕಾರಿ ಹಭಾಗಿತ್ವವನ್ನು ಬಲಪಡಿಸುವುದು’’ ಎಂಬ ವಿಷಯದೊಂದಿಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸ ಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ .ಎಂ.ಎನ್. ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.

ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮವನ್ನು ಈ ಬಾರಿ ಹಮ್ಮಿಕೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದರು.

ಮಂಗಳೂರಿನಲ್ಲಿ ನವೆಂಬರ್ 18ರಂದು ನಡೆಯುವ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನುಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ನೆರವೇರಿ ಸಲಿದ್ದಾರೆ. ಸಹಕಾರ ಸಪ್ತಾಹದ ಉದ್ಘಾಟನೆ ಯನ್ನು ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ಅವರು ನೆರವೇರಿಸಲಿ ರುವರು.‘‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ’’ವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನೆರವೇರಿಸಲಿದ್ದಾರೆ.

‘‘ಉತ್ತಮ ಸ್ವ-ಸಹಾಯ ಸಂಘ’’ಗಳಿಗೆ ಪುರಸ್ಕಾರವನ್ನುಸಂಸದರಾದ ನಳಿನ್‌ಕುಮಾರ್ ಕಟೀಲ್ ಅವರು ಪ್ರದಾನ ಮಾಡಲಿರುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಮಾನ್ಯ ಅಧ್ಯಕ್ಷರಾದ ಜಿ. ಟಿ. ದೇವೇಗೌಡ ನೆರವೇರಿಸಲಿರುವರು.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರ ಕುಮಾರ್‌ರವರು ವಹಿಸಲಿರುವರು. ‘‘ಸಹಕಾರ ಜಾಥಾ’’ ಉದ್ಘಾಟನೆಯನ್ನು ಶಾಸಕರಾದ ವೇದವ್ಯಾಸ್ ಡಿ. ಕಾಮತ್ ನೆರವೇರಿ ಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಶಾಸಕರಾದ ಡಾ .ಭರತ್ ಶೆಟ್ಟಿ ವೈ., ಶಾಸಕರು ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇದರ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಭಾಗವಹಿ ಸಲಿರುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಅವರು ಗೌರವ ಉಪಸ್ಥಿತರಿರುವರು.ವಿಶೇಷ ಆಹ್ವಾನಿತರಾಗಿ ಮಂಜುನಾಥ ಪ್ರಸಾದ್, (ಸರಕಾರದ ಪ್ರಧಾನ ಕಾರ್ಯದರ್ಶಿಗಳು, ಸಹಕಾರ ಇಲಾಖೆ,) ಕ್ಯಾಪ್ಟನ್ ಡಾ॥ ಕೆ. ರಾಜೇಂದ್ರ,(ಸಹಕಾರ ಸಂಘಗಳ ನಿಬಂಧಕರು, )ಮುಲ್ಲೈ ಮಗಿಲನ್ ಎಂ. ಪಿ(ದ.ಕಜಿಲ್ಲಾಧಿಕಾರಿ) ಅನುಪಮ್ ಅಗರ್‌ವಾಲ್,( ಮಂಗಳೂರು ಪೊಲೀಸ್ ಆಯುಕ್ತರು) ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ‘‘ಸಹಕಾರ ಜಾಥಾ’’ ಆಯೋಜನೆ ಮಾಡಲಾಗಿದ್ದು, ಪೂರ್ವಾಹ್ನ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳವಿವಿಧ ಟ್ಯಾಬ್ಲೋಗ ಳೊಂದಿಗೆ ನಡೆಯಲಿದೆ.70ನೇ ಅಖಿಲ ಭಾರತ ಸಹಕಾರ ಸಪ್ತಾಹದ 5ನೇ ದಿನವಾದ ನ.18ರಂದು ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಇಲ್ಲಿ ನಡೆಯುವ ರಾಜ್ಯ ಮಟ್ಟದ ವಿಶಿಷ್ಟ ಕಾರ್ಯಕ್ರಮದಲ್ಲಿ ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಸಹಕಾರ ಸಂಸ್ಥೆಗಳು, ಸಹಕಾರಿಗಳು, ಸ್ವ-ಸಹಾಯಸಂಘದ ಸದಸ್ಯರು ಭಾಗವಹಿಸಿ, ಈ ಕಾರ್ಯ ಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಿ, ಸಹಕಾರ ಚಳುವಳಿಯನ್ನುಅರ್ಥಪೂರ್ಣವಾಗಿಸಲು ಎಲ್ಲರೂ ಸಹಕರಿಸ ಬೇಕು ಎಂದು ಡಾ ಎಂ. ಎನ್. ರಾಜೇಂದ್ರ ಕುಮಾರ್‌ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಡಾ. ದೇವಿಪ್ರಸಾದ್‌ ಶೆಟ್ಟಿ, ಶಶಿ ಕುಮಾರ್‌ ರೈ, ಸದಾಶಿವ ಉಳ್ಳಾಲ್‌, ರಾಜು ಪೂಜಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿಯೂನಿಯನ್ ಅಧ್ಯಕ್ಷರುಗಳಾದ ಬೆಳ್ಳಿಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ್‌ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News