ಸುಳ್ಯ| ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣ: ಆರೋಪಿ ಶಂಕರ ನಾಯಕ್ ಸೆರೆ
Update: 2024-10-16 16:16 GMT
ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಸ್ವಂತ ಅತ್ತಿಗೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಶಂಕರ ನಾಯಕ್ ಎಂಬಾತನನ್ನು ಬೆಳ್ಳಾರೆ ಪೊಲೀಸರು ಆಸ್ಪತ್ರೆಯಿಂದ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬೆಂಕಿ ಹಚ್ಚಿದ್ದ ವೇಳೆ ಬೆಂಕಿ ವ್ಯಾಪಿಸಿ ಶಂಕರ ನಾಯಕ್ ನಿಗೂ ಗಾಯವಾಗಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬುಧವಾರ ಆತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಈ ವೇಳೆ ಆತನನ್ನು ಕಸ್ಟಡಿಗೆ ಪಡೆದ ಬೆಳ್ಳಾರೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಿಂದ ಗಂಭೀರ ಗಾಯಗೊಂಡಿರುವ ಜಯಭಾರತಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.