ಸುಳ್ಯ: ಲಾರಿ ಢಿಕ್ಕಿ; ಪಾದಚಾರಿ‌ ಮಹಿಳೆ ಮೃತ್ಯು

Update: 2024-02-07 08:32 GMT

ಸುಳ್ಯ:  ಲಾರಿ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ನಗರದ ಬಸ್ ನಿಲ್ದಾಣ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಮಾಣಿ‌-ಮೈಸೂರು ರಾ. ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ತಮಿಳು ನಾಡು ನೋಂದಾಯಿತ ಲಾರಿಯೊಂದು ಮಹಿಳೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

 ಮೃತ ಮಹಿಳೆಗೆ ಸುಮಾರು 40 ವರ್ಷ ಪ್ರಾಯವಿರಬಹುದೆಂದು ಅಂದಾಜಿಸಲಾಗಿದೆ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರ ಗುರುತು ಪತ್ತೆಯಾಗಿರುವುದಿಲ್ಲ. ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News