ಸುಳ್ಯ: ಮಸೂದ್ ಕೊಲೆ ಪ್ರಕರಣದ ಇನ್ನಿಬ್ಬರು ಆರೋಪಿಗಳಿಗೆ ಜಾಮೀನು

Update: 2023-11-03 09:21 GMT

ಸುಳ್ಯ: ಕಳಂಜದಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ.

ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇವರು ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ರವರು ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.

ಪ್ರಕರಣದ ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಆರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News