ಸುಳ್ಯ: ಉರುಳಿಗೆ ಸಿಲುಕಿ ಚಿರತೆ ಸಾವು ಪ್ರಕರಣ; ಇಬ್ಬರ ಬಂಧನ

Update: 2023-08-29 16:03 GMT

ಸುಳ್ಯ: ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಯರಾಮ ಮತ್ತು ಪೃಥ್ವಿ ಪಡ್ಡಂಬೈಲು ಎಂದು ಗುರುತಿಸಲಾಗಿದೆ.

ಪಡ್ಡಂಬೈಲು ಎಂಬಲ್ಲಿ ಸುಮಾರು ಒಂದೂವರೆ ವರ್ಷದ ಚಿರತೆ ಉರುಳಿಗೆ ಸಿಲುಕಿ ಸಾವನ್ನಪ್ಪಿದೆ. ಅರಣ್ಯ ಇಲಾಖಾಧಿಕಾರಿ ಗಳು ಸ್ಥಳಕ್ಕೆ ಅಗಮಿಸಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ವನ್ಯ ಜೀವಿ ಹತ್ಯೆ ಸಂಬಂಧಪಟ್ಟು ಪ್ರಕರಣ ದಾಖಲಿಸಲಾಗಿದೆ. ತನಿಖೆ ಆರಂಭಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ್ದಾರೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News