ಸುರತ್ಕಲ್: ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

Update: 2024-02-09 14:51 GMT

ಸುರತ್ಕಲ್: ಇಲ್ಲಿನ ನಾಡಕಚೇರಿ ಬಳಿಯ ಕ್ಯಾಂಟೀನೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಮೃತವ್ಯಕ್ತಿಯನ್ನು ಸುರತ್ಕಲ್ ನಿವಾಸಿ ಜಗದೀಶ್ ಯಾನೆ ಜಗ್ಗು (40) ಎಂದು ಗುರುತಿಸಲಾಗಿದೆ.

ಜಗದೀಶ್ ಅವರು ನಾಡಕಚೇರಿಯ ಹಿಂಭಾಗದಲ್ಲಿರುವ ಕ್ಯಾಟೀನ್ ನಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News