ಹಳೆಕೋಟೆ ಸೈಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Update: 2023-09-15 06:00 GMT

ಉಳ್ಳಾಲ, ಸೆ.15: ಶಿಕ್ಷಕರ ದಿನಾಚರಣೆಯ ಅಂಗವಾಗಿ ಹಳೆಕೋಟೆ ಸಯ್ಯದ್ ಶಿಕ್ಷಣ ಸಂಸ್ಥೆಯಲ್ಲಿ ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಒಳಪಟ್ಟ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕ ಹಾಗೂ ಹಳೆಕೋಟೆ ಸಯ್ಯದ್ ಮದನಿ ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಗೌರವಿಸಲಾಯಿತು.

ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮಾತನಾಡಿ, ನಮ್ಮ ಶಿಕ್ಷಕರನ್ನು ನಾವೇ ಗುರುತಿಸದಿದ್ದರೆ ಬೇರೆ ಯಾರು ಗುರುತಿಸುವುದಿಲ್ಲ, ಮೊದಲು ನಮ್ಮ ಸಂಸ್ಥೆಯಿಂದಲೇ ಗುರುತಿಸಬೇಕು. ಒಂದು ಮಾಂಸದ ಮುದ್ದೆಯಂತಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸಮಾಜದ ಮುನ್ನೆಲೆಗೆ ತರುವುದು ಶಿಕ್ಷಕರಾಗಿದ್ದಾರೆ, ಆದ್ದರಿಂದ ಒಳ್ಳೆಯ ಸಮಾಜ ನಿರ್ಮಾಣಮಾಡಲು ಶಿಕ್ಷಕರ ಪಾತ್ರವನ್ನು ಮಹತ್ವದ್ದು, ಈ ನಿಟ್ಟಿನಲ್ಲಿ ಇನ್ನೂ ಹೆಚ್ಚು ಹೆಚ್ಚು ಮಕ್ಕಳಿಗೆ ಕಳುಹಿಸಲು ದೇವರು ಶಿಕ್ಷಕರಿಗೆ ಅನುಗ್ರಹಿಸಲಿ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಮಾತನಾಡಿ ಶಿಕ್ಷಕರು ಪ್ರೋತ್ಸಾಹದಾಯಕ ಮಾತಿನ ಮೂಲಕ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕು ಎಂದರು.

ಶಾಲಾ ಸಂಚಾಲಕ ಇಸ್ಮಾಯೀಲ್ ಹಾಜಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಉಳ್ಳಾಲ ಕೇಂದ್ರ ಮಸೀದಿ ಮಾಹಿ ಪ್ರಧಾನ ಕಾರ್ಯದರ್ಶಿ ಹಾಹಿ ಮುಹಮ್ಮದ್ ತ್ವಾಹಾ, ಶಾಲಾಭಿವೃದ್ದಿ ಸಮಿತಿಯ ಸದಸ್ಯ ಹಾಜಿ ಝೈನುದ್ದೀನ್, ಉಳ್ಳಾಲ ಕೇಂದ್ರ ಜುಮಾ ಮಸೀದಿಯ ಸದಸ್ಯ ಫಾರೂಕ್ ಯು.ಎಚ್., ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಅಲ್ತಾಫ್ ಯು.ಎಚ್., ಉದ್ಯಮಿ ಮುಹಮ್ಮದ್, ಎಂ.ಎಚ್.ಇಬ್ರಾಹೀಂ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸುಶ್ಮಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶೀಲಾ ಶೆಟ್ಟಿ, ಮೋಹನ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಯವಂತಿ ಸೋನ್ಸ್, ಉಳ್ಳಾಲ ಭಾರತ್ ಶಾಲೆಯ ಮುಖ್ಯ ಶಿಕ್ಷಕಿ ವಿನಯ ಕುಮಾರಿ, ಉಳ್ಳಾಲ ಸೈಯದ್ ಮದನಿ ಐಟಿಐ ಪ್ರಾಂಶುಪಾಲ ವಿಶ್ವರಾಜ್, ಟಿಪ್ಪು ಸುಲ್ತಾನ್ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ರಹ್ಮಾನ್, ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪವಿತ್ರಾ, ಕಲ್ಲಾಪು ಹಝ್ರತ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ನಸೀಮಾ, ಅಳೇಕಲ ಹಝ್ರತ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ರಮ್ಲತ್ ಬಾನು, ಹಝ್ರತ್ ಹೆಣ್ಣು ಮಕ್ಕಳ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ, ಕೋಟೆಪುರ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಗೀತಾ.ಶೆಟ್ಟಿ, ಉಳ್ಳಾಲ ಹಝ್ರತ್ ಅಂಗ್ಲ ಮಾಧ್ಯಮ ಶಾಲೆಯ ಇಮ್ತಿಯಾಝ್ ಮತ್ತು ರಸೂಲ್ ಖಾನ್, ನಿವೃತ್ತ ಶಿಕ್ಷಕಿ ಶಶಿಕಲಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ವತಿಯಿಂದ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೆ.ಎಂ.ಕೆ.ಮಂಜನಾಡಿಯವರನ್ನು ಸನ್ಮಾನಿಸಲಾಯಿತು. ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮತ್ತು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಪ್ರಶಾಂತ್ ಅವರನ್ನು ಗೌರವಿಸಲಾಯಿತು.

ಸಯ್ಯದ್ ಮದನಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಕೆ.ಎಮ್.ಕೆ ಮಂಜನಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿ ರಂಸೀನಾ, ಮುಫೀದಾ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಸಪ್ನಾ ಮತ್ತು ವೀಣಾ ಶಿಕ್ಷಕರ ದಿನಾಚರಣೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿ ರಕ್ಷಿತಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News