ಕಥೋಲಿಕ್ ಶಿಕ್ಷಣ ಮಂಡಳಿಯಲ್ಲಿ ಶಿಕ್ಷಕರ ದಿನಾಚರಣೆ

Update: 2023-09-02 13:12 GMT

ಮಂಗಳೂರು, ಸೆ.2: ಕಥೋಲಿಕ್ ಶಿಕ್ಷಣ ಮಂಡಳಿ ವತಿಯಿದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಗರಿಷ್ಟ ಫಲಿತಾಂಶ ಪಡೆದ ಸಂಸ್ಥೆಗಳಿಗೆ ಪುರಸ್ಕಾರ ಕಾರ್ಯಕ್ರಮ ಶನಿವಾರ ನಡೆಯಿತು.

ಅಧ್ಯಕ್ಷತೆಯನ್ನು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಅತೀ ವಂ. ಡಾ. ಪೀಟರ್ ಪೌವ್ಲ್ ಸಲ್ಡಾನಾ ವಹಿಸಿದ್ದರು. ಬಜ್ಜೋಡಿ ಪಾಲನಾ ಕೇಂದ್ರದ ನಿರ್ದೇಶಕ ವಂ. ಸಂತೋಷ್ ರಾಡ್ರಿಗಸ್, ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ. ಆ್ಯಂಟನಿ ಶೆರಾ, ನಿಯೋಜಿತ ಕಾರ್ಯದರ್ಶಿ ವಂ. ಪ್ರವೀಣ್ ಲಿಯೋ ಲಸ್ರಾದೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 2022-23ನೆ ಸಾಲಿನಲ್ಲಿ ಅಗಲಿದ ಶಿಕ್ಷಕ, ಶಿಕ್ಷಕೇತರ ಹಾಗೂ ವಿದ್ಯಾರ್ಥಿಗಳಿಗೆ ನಿಯೋಜಿತ ಕಾರ್ಯದರ್ಶಿ ವಂ. ಪ್ರವೀಣ್ ಲಿಯೋ ಲಸ್ರಾದೋ ಶ್ರದ್ಧಾಂಜಲಿ ಅರ್ಪಿಸಿದರು.

ಕಥೋಲಿಕ್ ಶಿಕ್ಷಣ ಮಂಡಳಿಯ ಸಂಸ್ಥೆಗಳಲ್ಲಿ ಹಲವು ವರ್ಷ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಒಟ್ಟು 60 ಮಂದಿ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಸುಳ್ಯದ ಸೈಂಟ್ ಬ್ರಿಜಿಟ್ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಸಿ. ಆ್ಯಂಟನಿ ಮೇರಿ ವಂದಿಸಿದರು. ಕೊಟ್ಟಾರ ಸೈಂಟ್ ಪೀಟರ್ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪೆಟ್ರಿಶಿಯಾ ಲೋಬೋ, ಉರ್ವಾ ಸೈಂಟ್ ಅಲೋಶಿಯಸ್ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಫ್ಲೋರಿನ್ ಪಿರೇರಾ ಕಾರ್ಯಕ್ರಮದಲ್ಲಿ ಸಹಕರಿಸಿದರು.

ರೊಜಾರಿಯೊ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಅಲೋಶಿಯಸ್ ಡಿಸೋಜಾ, ಉರ್ವಾ ಸೈಂಟ್ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಡಾ. ಪ್ರೆಸಿಲ್ಲ ಡಿಸೋಜ ಅನಿಸಿಕೆ ಹಂಚಿಕೊಂಡರು.

ಬೊಂದೇಲ್‌ನ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಸ್ವಾಗತಿಸಿದರು. ಕಾಸ್ಸಿಯಾ ಪ್ರೌಢಶಾಲೆಯ ಶಿಕ್ಷಕಿ ಪ್ರೀತಿ ಡಿಸೋಜಾ ಕಾರ್ಯಕ್ರಮ ನಿರ್ವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News