ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿ ಸೆರೆ

Update: 2023-07-21 17:36 GMT

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಸಿಫ್ (27) ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಈತನ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆ ಉಳ್ಳಾಲ , ಪೊಲೀಸ್ ಠಾಣೆ ಉಪ್ಪಿನಂಗಡಿ, ಪಣಂಬೂರು, ಚಿಕ್ಕಮಂಗಳೂರು ನಗರ ಹಾಗೂ ಇತರ ಕಡೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News