ರಾಜ್ಯ ಗೃಹ ಸಚಿವರಿಂದ ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ
Update: 2023-10-29 06:10 GMT
ಬಜ್ಪೆ, ಅ.29: ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ರವಿವಾರ ಉದ್ಘಾಟಿಸಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ಡಿಐಜಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಡಿಸಿಪಿ ದಿನೇಶ್ ಕುಮಾರ್, ಮನೋಜ್ ಕುಮಾರ್, ನಿರೀಕ್ಷಕ ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು.