ಕಳ್ಳತನ ಪ್ರಕರಣ; ಆರೋಪಿ ಬಂಧನ

Update: 2024-08-27 16:16 GMT

ಉಪ್ಪಿನಂಗಡಿ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಕಡಬ ತಾಲೂಕು ಐತ್ತೂರು ಗ್ರಾಮದ ಕಾಯರ್ತಡ್ಕ ನಿವಾಸಿ ಹಮೀದ್ (27) ಬಂಧಿತ ಆರೋಪಿ.

2023ರ ಅಕ್ಟೋಬರ್ 10ರಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುವ ಕೆ.ಎನ್.ಆರ್. ಸಂಸ್ಥೆಯ ಕಬ್ಬಿಣದ ಶೀಟ್‍ಗಳನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ. ಅಲ್ಲದೇ ಈತನ ಮೇಲೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ, ದಾವಣಗೆರೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದವಾಗಿ ಸಿಲುಕಿದ ಪ್ರಕರಣ, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬೆಂಗಳೂರು ಕೊತ್ನಲೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News