ತಿರುವನಂತಪುರ - ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರುವರೆಗೆ ವಿಸ್ತರಣೆ

Update: 2024-02-21 16:27 GMT

ಮಂಗಳೂರು: ತಿರುವನಂತರಪುರ - ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.

ರೈಲ್ವೆ ಮಂಡಳಿ ಬುಧವಾರ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲು (ನಂ. 20632/20631) ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ.

ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06:15ಕ್ಕೆ ಹೊರಟು ಅಪರಾಹ್ನ 3:05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4:05ಕ್ಕೆ ಹೊರಟು ಮಂಗಳೂರನ್ನು ರಾತ್ರಿ 12:40ಕ್ಕೆ ತಲುಪಲಿದೆ.

ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ತಾನು ಮಾಡಿರುವ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ  ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News