ತೊಕ್ಕೊಟ್ಟು: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ ಪ್ರಕರಣ: ಡಿವೈಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

Update: 2024-11-09 16:50 GMT

ತೊಕ್ಕೊಟ್ಟು: ಚೆಂಬುಗುಡ್ಡೆ ರಸ್ತೆಯಲ್ಲಿ ಇಂದು ಸಂಜೆ ನಡೆದ ಅಪಘಾತದಲ್ಲಿ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್ , ಚೆಂಬುಗುಡ್ಡೆಯಲ್ಲಿ ಇವತ್ತು ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ. ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಶಾಸಕರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ ಎಂದು ಪ್ರಶ್ನಿಸಿದ ಅವರು ಒಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಚೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಡುತ್ತಿದ್ದಾರೆ. ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷ ರಝಾಕ್ ಮುಡಿಪು, ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಳೇಕಲ, ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್, ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್, ಇಕ್ಬಾಲ್ ಹರೇಕಳ, ಹೈದರ್ ಆಲಡ್ಕ, ಬಶೀರ್ ಲಚ್ಚಿಲ್, ನೌಫಲ್ ಅಲೇಕಳ, ಸರ್ಫರಾಝ್ ಗಂಡಿ,ಅನ್ಸಾರ್ ಖಂಡಿಗ,ಶಾಫಿ ಮುಡಿಪು,ದಿವ್ಯರಾಜ್ ಕುತ್ತಾರ್,ರಫೀಕ್ ಹರೇಕಳ,ಇಬ್ರಾಹಿಂ ಮದಕ ಉಪಸ್ಥಿತರಿದ್ದರು.‌ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News