ಕರಾವಳಿ ಉತ್ಸವ ಯೋಜನೆಗೆ ಚಿಂತನೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2023-10-27 15:32 GMT

ಮಂಗಳೂರು: ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಕರಾವಳಿ ಉತ್ಸವದಲ್ಲಿ ಜನಾಕರ್ಷ ಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಈಗಿನ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವುದು ಉತ್ತಮವಾಗಿದೆ ಎಂದು ಅವರು ಹೇಳಿದರು.

ಜಿಲ್ಲೆ ಶಿಕ್ಷಣ ಸಂಸ್ಥೆಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಾಂಸ್ಕೃತಿಕ ಉತ್ಸವವನ್ನು ನಡೆಸಬಹುದಾಗಿದೆ. ಗುಣಮಟ್ಟದ ಕಾರ್ಯಕ್ರಮಗಳಿಗೆ ಅದ್ಯತೆ ನೀಡಬೇಕು. ಹೊರಗಿನ ಕಲಾವಿದರಿಗೆ, ಸ್ಥಳೀಯರಿಗೆ ಒತ್ತು ನೀಡಬೇಕಿದೆ ಎಂದು ಅವರು ಹೇಳಿ ದರು. ಕರಾವಳಿ ಉತ್ಸವವನ್ನು 10 ದಿನದ ಬದಲು ಮೂರು ದಿನಗಳಿಗೆ ಸೀಮಿತಗೊಳಿಸಿ ಹೆಚ್ಚು ಗುಣಮಟ್ಟದ ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಕರಾವಳಿ ಉತ್ಸವದ ಬಗ್ಗೆ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ, ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ಮತ್ತಿತ್ತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News