ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಮೂರು ದಿನಗಳ ಆಧಾರ್ ನೋಂದಣಿ ಶಿಬಿರಕ್ಕೆ ಚಾಲನೆ

Update: 2024-11-13 06:54 GMT

ಉಳ್ಳಾಲ: ಪತ್ರಕರ್ತರು ಜನರ ಸಮಸ್ಯೆಗಳನ್ನು ಭಾವನೆಗಳನ್ನು ಹುಡುಕುತ್ತಾ ಸಮಾಜಕ್ಕೆ, ಆಡಳಿತ ವ್ಯವಸ್ಥೆಗೆ ಮುಟ್ಟಿಸುವಲ್ಲಿ ಬೆಳಕು ಚೆಲ್ಲುವ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಈ ನಡುವೆ ಉಳ್ಳಾಲದ ಪತ್ರಕರ್ತರ ಸಂಘ ವಿಶಿಷ್ಟವಾಗಿ ತಮ್ಮನ್ನೇ ಸೇವಾ ಚಟುವಟಿಕೆಯಲ್ಲಿ ಇತರೆ ಸೇವಾ ಸಂಸ್ಥೆಗಳ ಜೊತೆಗೆ ಭಾಗಿಯಾಗುವ ಮೂಲಕ ಮಾದರಿಯಾಗಿದೆ ಎಂದು ಸೋಮೇಶ್ವರ ಪುರಸಭೆ ಹಾಗೂ ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ಮತ್ತಡಿ ಅಭಿಪ್ರಾಯಪಟ್ಟರು.

ಅವರು ಕಾರ್ಯನಿರತ ಪತ್ರಕರ್ತರ ಸಂಘ, ಉಳ್ಳಾಲ ಘಟಕ, ಹಿದಾಯ ಫೌಂಡೇಶನ್ ಮಂಗಳೂರು, ಯು.ಆರ್.ಫೌಂಡೇಶನ್ ಮಂಗಳೂರು ಮತ್ತು ಆಧಾರ್ ಸೇವಾ ಕೇಂದ್ರ, ಮಂಗಳೂರು ಇವುಗಳ ಆಶ್ರಯದಲ್ಲಿ ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, ಪತ್ರಕರ್ತರ ಸಂಘ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮುಂದಾಗಿರುವುದು ಶ್ಲಾಘನೀಯ. ಪ್ರತೀ ತಾಲೂಕು, ಪ್ರತೀ ಸಂಘದಲ್ಲಿ ಸಮಾಜಮುಖಿ ಕಾರ್ಯಕ್ರಮಗಳಾಗಬೇಕು ಎಂದರು.

ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಹಿದಾಯ ಫೌಂಡೇಶನ್ ಯೂತ್ ವಿಂಗ್ ಉಪಾಧ್ಯಕ್ಷ ಆಶಿಕ್ ಕುಕ್ಕಾಜೆ ಮಾತನಾಡಿದರು.

ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಅವರನ್ನು ಗೌರವಿಸಲಾಯಿತು.

ಯು.ಆರ್ ಫೌಂಡೇಶನ್ ಅಧ್ಯಕ್ಷ ಉಸ್ಮಾನ್ ಎ.ಎಂ., ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ್ ಕುತ್ತಾರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ದಿನೇಶ್ ನಾಯಕ್ ತೊಕ್ಕೊಟ್ಟು, ಆರಿಫ್ ಯು.ಆರ್., ಯು.ಆರ್ ಫೌಂಡೇಷನ್ ಸದಸ್ಯ ಸಫ್ವಾನ್ ಯು.ಆರ್., ಆಧಾರ್ ಸೇವಾ ಕೇಂದ್ರದ ಸಿಬ್ಬಂದಿ ಚೈತ್ರಾ, ಯೋಗಿಣಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಶಶಿಧರ್ ಪೊಯ್ಯತ್ತಬೈಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವಜ್ರ ಗುಜರನ್ ವಂದಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News