ಸೆ.26ರಂದು ರಮಾನಾಥ ರೈಯವರಿಗೆ ಹುಟ್ಟೂರ ಗೌರವಾರ್ಪಣೆ

Update: 2023-09-25 10:07 GMT

ಉಪ್ಪಿನಂಗಡಿ: ಅಭಿನಂದನಾ ಸಮಿತಿ ಪೆರ್ನೆ- ಬಿಳಿಯೂರು, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಇದರ ಸಹಯೋಗದಲ್ಲಿ ವಲಯ ಕಾಂಗ್ರೆಸ್ ಪೆರ್ನೆ- ಬಿಳಿಯೂರು ಇದರ ಆಶ್ರಯದೊಂದಿಗೆ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈಯವರ ಹುಟ್ಟು ಹಬ್ಬ- ಹುಟ್ಟೂರ ಅಭಿನಂದನೆ ಹಾಗೂ ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಪೆರ್ನೆ- ಬಿಳಿಯೂರು ನಾಗರಿಕರ ಸನ್ಮಾನ ಕಾರ್ಯಕ್ರಮ ಸೆ.26ರಂದು ಪೆರ್ನೆಯ ಎ.ಎಂ. ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ತಿಳಿಸಿದರು.

ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಮಾನಾಥ ರೈಯವರು ಪ್ರಶ್ನಾತೀತ ನಾಯಕರಾಗಿದ್ದು, ತನ್ನ ಹುಟ್ಟೂರ ಬಗ್ಗೆ ಅತೀವ ಪ್ರೀತಿಯುಳ್ಳವರು. ಕಳೆದ ವರ್ಷದಿಂದ ಅವರ ಹುಟ್ಟೂರಿನಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಈ ಬಾರಿಯೂ ಅವರ 72ನೇ ವರ್ಷದ ಹುಟ್ಟುಹಬ್ಬವನ್ನು ನಾವೆಲ್ಲಾ ಸೇರಿ ಆಚರಿಸಲು ಮುಂದಾಗಿದ್ದು, ಈ ಸಂದರ್ಭ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈಯವರಿಗೆ ಪೆರ್ನೆ- ಬಿಳಿಯೂರು ನಾಗರಿಕ ಸನ್ಮಾನ ಕೂಡಾ ನಡೆಯಲಿದೆ. ಬೆಳಗ್ಗೆ 10ರಿಂದ ಶಾಸಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, 10:15ರಿಂದ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಗೌರವಾನ್ವಿತ ಅತಿಥಿಗಳಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಲಿದ್ದು, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಖ್ಯಾತ ವೈದ್ಯ ಡಾ. ರಘು ಬೆಳ್ಳಿಪ್ಪಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಪೆರ್ನೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಜಯ, ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ತೋಯಜಾಕ್ಷ ಶೆಟ್ಟಿ, ಪೆರ್ನೆ ಎ.ಎಂ. ಅಡಿಟೋರಿಯಂನ ಮಾಲಕ ಸುಲೈಮಾನ್ ಕೆ. ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಭಿನಂದನಾ ಸಮಿತಿಯ ಸಂಚಾಲಕ ಉಮಾನಾಥ ಶೆಟ್ಟಿ ಪೆರ್ನೆ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರುಗಳಿಗೆ ಹಾಗೂ ಪೆರ್ನೆ- ಬಿಳಿಯೂರು ಬೂತ್ ಅಧ್ಯಕ್ಷರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಶಾಫಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಹಮ್ಮದ್ ಫಾರೂಕ್, ಪೆರ್ನೆ ಗ್ರಾ.ಪಂ.ನ ಮಾಜಿ ಅಧ್ಯಕ್ಷ ತನಿಯಪ್ಪ ಪೂಜಾರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News