ವಿಟ್ಲ: ಟಿ.ಟಿ ವಾಹನ ಪಲ್ಟಿ; ಆರು ಮಂದಿಗೆ ಗಾಯ

Update: 2024-01-16 11:13 GMT

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.

ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಅವರು ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ ಯಾತ್ರೆ ಮುಗಿಸಿಕೊಂಡು ಹಿಂತಿರುಗುತ್ತಿದ್ದರು. ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News