ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾರ್ಯಾಗಾರ

Update: 2024-12-06 20:36 IST
ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾರ್ಯಾಗಾರ
  • whatsapp icon

ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಬಿಐಟಿ) ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ “ದಿ ಇಂಡಿಯನ್ ಸ್ಟಾರ್ಟ್ಅಪ್ ಆಂಡ್ ಎಂಎಸ್ಎಂಇ ಇಕೋ ಸಿಸ್ಟಮ್ ಇನ್ ದಿ ಏಜ್ ಆಫ್ ಎಐ”( The Indian Startup and MSME Ecosystem in the Age of AI) ಶೀರ್ಷಿಕೆಯಡಿ ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಬಿಐಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ವಸಂತ ಕುಮಾರ್ ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಭಾರತದ ಆರ್ಥಿಕತೆಯಲ್ಲಿ ಸ್ಟಾರ್ಟ್ ಅಪ್ ಗಳು ಮತ್ತು ಎಂಎಸ್ಎಂಇಗಳ ಪ್ರಾಮು ಖ್ಯತೆ, ನಾವೀನ್ಯತೆ ಮತ್ತು ಸುಸ್ಥಿರತೆಯನ್ನು ಬೆಳೆಸುವಲ್ಲಿ AIಯ ಸಾಮರ್ಥ್ಯದ ಬಗ್ಗೆ ಅವರು ಮಾತನಾಡಿದರು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿಐಟಿಯ ಪ್ರಾಂಶುಪಾಲರಾದ ಡಾ.ಎಸ್.ಐ. ಮಂಝೂರ್ ಬಾಷಾ, ಕಾರ್ಯಾಗಾರವನ್ನು ಆಯೋಜಿಸುವ ಮೂಲಕ ಶೈಕ್ಷಣಿಕ ಮತ್ತು ಉದ್ಯಮದ ನಡುವಿನ ಅಂತರವನ್ನು ಕಡಿಮೆ ಮಾಡಲು ಸಂಸ್ಥೆಯು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಇನಿಟಿಯಮ್ ಇನ್ಕ್ಯುಬೇಶನ್ ಮತ್ತು ಮೆಂಟರಿಂಗ್ ಕನ್ಸಲ್ಟೆನ್ಸಿಯ ಸಂಸ್ಥಾಪಕ ಮತ್ತು ಸಿಇಒ ಚೇತನ್ ಕುಮಾರ್ ಜಿ ಎಸ್ ಕಾರ್ಯಾಗಾರದಲ್ಲಿ ಅತಿಥಿಗಳಾಗಿ ಭಾಗವಹಿಸಿದರು. ರಾಷ್ಟ್ರೀಯ ಸ್ಟಾರ್ಟ್ಅಪ್ ಮಾರ್ಗದರ್ಶಕರಾಗಿ ತಮ್ಮ ಅನುಭವ ಗಳನ್ನು ಅವರು ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಬೆಂಗಳೂರಿನ ಇನಿಟಿಯಮ್ ಇನ್ಕ್ಯುಬೇಶನ್ ಮತ್ತು ಮೆಂಟರಿಂಗ್ ಕನ್ಸಲ್ಟೆನ್ಸಿಯ ಯೋಜನಾ ನಿರ್ದೇಶಕರಾದ ಸಂತೋಷ್ ವಿ ಕೂಡ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ತಾಂತ್ರಿಕ ತರಬೇತಿ, ಸರ್ಕಾರದ ಯೋಜನೆಗಳು, ಹಣಕಾಸಿನ ಅವಕಾಶಗಳು ಮತ್ತು AI ಚಾಲಿತ ವ್ಯಾಪಾರ ಮಾದರಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಾಗಾರದಲ್ಲಿ ಪ್ರಾಧ್ಯಾಪಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಪ್ರೊ.ಗೋಕುಲದಾಸ್ ಅತಿಥಿಗಳನ್ನು ಪರಿಚಯಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಸಂದೀಪ್ ನಂಬಿಯಾರ್ ವಂದಿಸಿದರು.


















Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News